Back
ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪ್ರತಿ ವರ್ಷ ಫೆಬ್ರವರಿ 28 ರಂದು ಸರ್ ಸಿ ವಿ ರಾಮನ್ ರ "ರಾಮನ್ ಪರಿಣಾಮ" ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಗಳ ಸಹಯೋಗದೊಂದಿಗೆ ದೇಶಾದಾದ್ಯಂತ ವಿಜ್ಞಾನಕ್ಕೆ ಸಂಬಂಧಿತ ಚಟುವಟಿಕೆಗಳನ್ನು ಆಯೋಜಿಸಲು ಉತ್ತೇಜಿಸುತ್ತದೆ.

1987 ರಿಂದ ಪ್ರತಿ ವರ್ಷವು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಮತ್ತು ಶಿಕ್ಷಕರಿಗಾಗಿ ರಸಪ್ರಶ್ನೆ ಸ್ಪರ್ಧೆ,  ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆ, ಮಾದರಿ ತಯಾರಿಕೆ , ಉಪನ್ಯಾಸಗಳು ಮತ್ತು ತರಬೇತಿಗಳನ್ನು ಆಯೋಜಿಸುತ್ತಿದೆ.

  • ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಅರಿವು ಮೂಡಿಸುವುದು.
  • ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸುವುದು.
  • ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವುದು.
  • ಪ್ರಯೋಗಗಳ ಮೂಲಕ ಹೊಸ ಆವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಹುರಿದುಂಬಿಸುವುದು.
  • ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಸಕ್ತ ಬೆಳವಣಿಗೆ ಮತ್ತು ಅಭಿವೃದ್ಧಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು.
  • ವಿಜ್ಞಾನ, ತಂತ್ರಜ್ಞಾನ, ಗಣಿತ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪ್ರಯೋಗಗಳ ಮೂಲಕ ನಾವೀನ್ಯತೆಯನ್ನು ಮೂಡಿಸಲು ಪ್ರೇರೆಪಿಸುವುದು.

ಸುಸ್ಥಿರ ಭವಿಷ್ಯಕ್ಕಾಗಿ ಸಮಗ್ರ ವಿಜ್ಞಾನ ಮತ್ತು ತಂತ್ರಜ್ಞಾನದ ಅಳವಡಿಕೆ

FUTURE OF SCIENCE, TECHNOLOGY AND INNOVATION (STI) : IMPACTS ON EDUCATION, SKILLS AND WORK

ರಾಷ್ಟ್ರೀಯ ವಿಜ್ಞಾನ ದಿನಾಚರಣೆ – 2023 

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೆಜಿಸುವ ಸಲುವಾಗಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ರಾಷ್ಟ್ರೀಯ ವಿಜ್ಞಾನ ದಿನಾಚರಣೆ – 2023 ನ್ನು ಜಾಗತಿಕ ಸಂರಕ್ಷಣೆಗಾಗಿ ವಿಜ್ಞಾನ ಎಂಬ ಶೀರ್ಷಿಕೆಯಡಿಯಲ್ಲಿ ಆಚರಿಸುತ್ತಿದೆ.

ಬೆಂಗಳೂರಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (8,9,10 ತರಗತಿ) ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯನ್ನು ದಿನಾಂಕ 11ನೇ ಫೆಬ್ರವರಿ 2023 ಶನಿವಾರದಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ ಏರ್ಪಡಿಸಲಾಗಿದೆ. ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯು ಭಾರತೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತ ಕಟ್ಟಡದ ಮುಂಭಾಗ ನಡೆಸಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸಲು ಗೂಗಲ್‌ ಅರ್ಜಿ ಮೂಲಕ ನೋಂದಾಯಿಸಿ: https://forms.gle/vZs9RUGwWUS2GHKf7 

×
ABOUT DULT ORGANISATIONAL STRUCTURE PROJECTS